Select Your Language

Notifications

webdunia
webdunia
webdunia
webdunia

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

Minister Satish Jarakiholi
Photo Courtesy X
ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನದೊಳಗೆ ಖಾತೆ ಹಂಚಿಕೆ ಅಂತಿಮಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಎಂದು ಹೇಳಿದರು.  

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯೊಳಗೆ ಸಿಎಂ ಡಿಕೆ ಶಿವಕುಮಾರ್ ಅವರು ಖಾತೆ ಹಂಚಿಕೆ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ.  ಸಂಪುಟದಲ್ಲಿ ಹಳಬರು ಹಾಗೂ ಆಡಳಿತದ ಬಗ್ಗೆ ಜ್ಞಾನ ಹೊಂದಿರುವವರು ಇದ್ದಾರೆ. ಹೀಗಾಗಿ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಇನ್ನೂ ಸಚಿವ ಸಂಪುಟದಿಂದ ಕೈಬಿಡುವ ವಿಚಾರದ ಬಗ್ಗೆ ನನಗೆ  ಯಾವುದೇ ಮಾಹಿತಿ ಇಲ್ಲ. ಈ ಕುರಿತು ಈಗಾಗಲೇ ಎಲ್ಲರೂ ಮಾತನಾಡಿದ್ದಾರೆ.

ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ. ಅಸಮಾಧಾನಗೊಂಡಿರುವವರ ಮನೆಗೆ ಮುಖ್ಯಮಂತ್ರಿ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಭೇಟಿ ನೀಡಿದ್ದಾರೆ. ಇತರ ಸಚಿವರೂ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌