Select Your Language

Notifications

webdunia
webdunia
webdunia
webdunia

ಶಾಸಕ ಸ್ಥಾನಕ್ಕೆ ಗುಡ್‌ಬೈ ಹೇಳಿ ಯತ್ನಾಳ್‌ಗೆ ಪಂಥಾಹ್ವಾನ ನೀಡಿದ ಸಚಿವ ಶಿವಾನಂದ ಪಾಟೀಲ

MLA Basanagouda Patil Yatnal, Minister Shivanand Patil, Assembly Speaker U.T. Khader

Sampriya

ಬೆಂಗಳೂರು , ಶುಕ್ರವಾರ, 2 ಮೇ 2025 (14:38 IST)
Photo Courtesy X
ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತ ನಾಯಕ, ಶಾಸಕ ಬಸನಗೌಡಪಾಟೀಲ ಯತ್ನಾಳ ನೀಡಿರುವ ಸವಾಲನ್ನು ಸ್ವೀಕರಿಸಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಪಂಥಾಹ್ವಾನ ನೀಡಿದ್ದಾರೆ.

ಶಿವಾನಂದ ಪಾಟೀಲ ಶುಕ್ರವಾರ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಖಾದರ್ ಅವರು ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.

ಬಸನಗೌಡಪಾಟೀಲ ಯತ್ನಾಳ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಶಿವಾನಂದ ಪಾಟೀಲರೇ ಅಲ್ಲ, ರಾಜಕೀಯಕ್ಕಾಗಿ ಪಾಟೀಲ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲನ್ನು ಶಿವಾನಂದ ಪಾಟೀಲವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ.

ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಅವರು ಶಿವಾನಂದ ಪಾಟೀಲ ಸವಾಲು ಹಾಕಿದ್ದಾರೆ. ಜೊತೆಗೆ ಯತ್ನಾಳ್ ರಾಜೀನಾಮೆ ನೀಡಿದ ಬಳಿಕ ನನ್ನ ರಾಜೀನಾಮೆ ಅಂಗೀಕರಿಸಬೇಕು ಎಂದು ಅವರು ಷರತ್ತು ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

India Pakistan: ಭಯೋತ್ಪಾದಕರ ಜೊತೆ ಲಿಂಕ್ ಇತ್ತು, ಈಗ ನಾವು ಅದೆಲ್ಲಾ ಮಾಡ್ತಿಲ್ಲ ಎಂದ ಪಾಕಿಸ್ತಾನಿ ನಾಯಕ ಬಿಲಾವಲ್ ಭುಟ್ಟೋ