ಬರಗಾಲ ಬರಲಿ ಎಂದು ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ಹೇಳಿಕೆ ಕಾಂಗ್ರೆಸ್ ಗೆ ಮುಳ್ಳು

Webdunia
ಸೋಮವಾರ, 25 ಡಿಸೆಂಬರ್ 2023 (13:06 IST)
Photo Courtesy: Twitter
ಬೆಂಗಳೂರು: ಬರಗಾಲ ಬರಲಿ ಎಂದು ರೈತರು ಕಾಯ್ತಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಈಗ ಆಡಳಿತಾರೂಢ ಕಾಂಗ್ರೆಸ್ ಮುಳ್ಳಾಗಿದೆ.

ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಪದೇ ಪದೇ ರೈತರಿಗೆ ಅವಮಾನ ಮಾಡುತ್ತಿರುವುದಕ್ಕೆ ಸಚಿವರ ಈ ಹೇಳಿಕೆಯೇ ಸಾಕ್ಷಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸರ್ಕಾರ ಕರೆಂಟು, ನೀರು, ಗೊಬ್ಬರ ಎಲ್ಲಾ ಫ್ರೀ ಆಗಿ ಕೊಟ್ಟಿದೆ. ರೈತರು ಬರಗಾಲ ಬರಲಿ ಎಂದು ಕಾಯ್ತಿದ್ದಾರೆ. ಬರಗಾಲ ಎಂದರೆ ರೈತರು ಸಾಲ ಮನ್ನಾ ಆಗುತ್ತದೆ ಎಂದು ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ ಕಷ್ಟದಲ್ಲಿರುವಾಗ ಸಾಲಮನ್ನಾ ಹೇಗೆ ಸಾಧ‍್ಯ? ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ಬೆಳೆಯುವುದರತ್ತ ಗಮನ ಹರಿಸಬೇಕು ಎಂದು ಹಗುರವಾಗಿ ಮಾತನಾಡಿದ್ದರು.

ಈ ವಿಚಾರ ಈಗ ಕಾಂಗ್ರೆಸ್ ಗೇ ಮುಳುವಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೂ ಮುಜುಗರವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಇಂತಹ ದುರಹಂಕಾರ ಒಳ್ಳೆಯದಲ್ಲ. ಈ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ. ಇದು ಹೆಚ್ಚು ದಿನ ಉಳಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments