Select Your Language

Notifications

webdunia
webdunia
webdunia
webdunia

ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ
ಚಾಮರಾಜನಗರ , ಭಾನುವಾರ, 23 ಅಕ್ಟೋಬರ್ 2022 (16:47 IST)
ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆ ಓರ್ವರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು. ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್​​ ಆಗಿದ್ದು, ಸಚಿವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ದೀಪೋತ್ಸವದಲ್ಲಿ ಭಾಗಿಯಾಗಲಿರುವ ಮೋದಿ