Publish Date: Fri, 21 Aug 2020 (10:30 IST)
Updated Date: Fri, 21 Aug 2020 (10:32 IST)
ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಇಂದು ನಿಧನರಾಗಿದ್ದಾರೆ.
ಅವರಿಗೆ 95 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬಳ್ಳಾರಿಯ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.
ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದರು ಎಂಬುದಾಗಿ ಸಚಿವರು ತಿಳಿಸಿದ್ದಾರೆ.