Select Your Language

Notifications

webdunia
webdunia
webdunia
webdunia

ಸಚಿವ ಸುಧಾಕರ್ ಸಿನಿಮಾ ರಂಗಕ್ಕೆ ಎಂಟ್ರಿ

ಸಚಿವ ಸುಧಾಕರ್ ಸಿನಿಮಾ ರಂಗಕ್ಕೆ ಎಂಟ್ರಿ
ಬೆಂಗಳೂರು , ಗುರುವಾರ, 7 ಏಪ್ರಿಲ್ 2022 (13:04 IST)
ನೈಜ ಘಟನೆಯಾಧಾರಿತ ತನುಜಾ ಸಿನಿಮಾದಲ್ಲಿ ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ.

ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ. 

ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ  ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು,

ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ  ಸಿನಿಮಾ ಕೂಡ ಸೆಟ್ಟೇರಿದ್ದು ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು .  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ  ತಮ್ಮ ಪಾತ್ರಕ್ಕೆ ತಾವೇ  ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ  ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ. 

ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದೆ. ಈ ಚಿತ್ರವು ಶಿವಮೊಗ್ಗ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಖಾತೆಗಳು ಹ್ಯಾಕ್!