Publish Date: Fri, 04 Sep 2020 (10:25 IST)
Updated Date: Fri, 04 Sep 2020 (10:26 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಅನಂತ್ ನಾಗ್ ಅವರು ಇಂದು 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕನ್ನಡ ಚಿತ್ರರಂಗದ ಹಿರಿಯ ನಟ , ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸಹಜ ಹಾಗೂ ಮನೋಜ್ಞ ಅಭಿನಯದ ಮೂಲಕ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಅನಂತ್ ನಾಗ್ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ಕಲಾಸೇವೆ ಮಾಡುವಂತಾಗಲಿ ಎಂದು ಆಶಿಸಿದ್ದಾರೆ.