ಸಚಿವ ತನ್ವೀರ್ ಸೇಠ್ ಒಬ್ಬ ಜಂಟಲ್ಮ್ಯಾನ್. ಅವರು ಅರೆನಗ್ನ ಚಿತ್ರಗಳ ವೀಕ್ಷಣೆ ಮಾಡುವಂತಹ ವ್ಯಕ್ತಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ, ಸಚಿವ ತನ್ವೀರ್ ಸೇಟ್ ತಮ್ಮ ಮೊಬೈಲ್ನಲ್ಲಿ ಅರೆನಗ್ನ ಯುವತಿಯರ ಚಿತ್ರಗಳನ್ನು ನೋಡುತ್ತಿರುವುದು ಮಾಧ್ಯಮಗಳ ಕ್ಯಾಮರಾ ಕಣ್ಣಿಗೆ ಬಿದ್ದಿತ್ತು.
ತನ್ವೀರ್ ನನ್ನ ಆತ್ಮಿಯ ಸಹದ್ಯೋಗಿ ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರು ಇಂತಹ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆ ಎನ್ನುವುದನ್ನು ನಾನು ನಂಬುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನನಗೆ ದೊರೆತಿಲ್ಲ. ಸಂಪೂರ್ಣ ಮಾಹಿತಿ ದೊರೆತ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ