Publish Date: Sat, 07 Oct 2017 (11:15 IST)
Updated Date: Sat, 07 Oct 2017 (11:19 IST)
ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ.
ತನ್ವೀರ್ ಸೇಠ್ ಅವರ ಸರ್ಕಾರಿ ಬಂಗಲೆ ಮೇಲೆ ದಾಳಿ ನಡೆಸಿರುವ ಕರವೇ ಕಾರ್ಯಕರ್ತರು ಮನೆಯ ಕಿಟಿಕಿ ಗಾಜುಗಳನ್ನು ಪುಡಿಗಟ್ಟಿದ್ದು, ಹೂ ಕುಂಡಗಳ ಒಡೆದು ದಾಂಧಲೆ ಎಬ್ಬಿಸಿದ್ದಾರೆ.
ಕನ್ನಡ ಮಾಧ್ಯಮಗಳ ಹೆಸರಿನಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಮನೆಯ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ