Publish Date: Sun, 10 Dec 2017 (10:46 IST)
Updated Date: Sun, 10 Dec 2017 (10:49 IST)
ಕೋಲಾರ: ಬಿಜೆಪಿಯಲ್ಲಿ ನಾಯಕತ್ವವೇ ಸರಿಯಿಲ್ಲ. ಸಮಾಜದಲ್ಲಿ ಅಶಾಂತಿ, ಕೋಮುಗಲಭೆ ಸೃಷ್ಟಿಸುವವರಿಗೆ ನಾಯಕತ್ವ ನೀಡಲಾಗುತ್ತಿದೆ ಎಂದು ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅನಂತ್ ಕುಮಾರ್ ಹೆಗ್ಡೆಯಂತಹ ಪ್ರಚೋದನಕಾರಿ ಭಾಷಣ ಮಾಡುವವರಿಗೇ ಬಿಜೆಪಿಯಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂದು ಟೀಕಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಗೊಂದಲ ಸೃಷ್ಟಿಸುತ್ತಿರುವವರು ಬಿಜೆಪಿ ನಾಯಕರು. ಪರಿವರ್ತನಾ ರ್ಯಾಲಿಯಲ್ಲಿ ಅವರು ಆಶ್ವಾಸನೆ ಕೊಡುತ್ತಿಲ್ಲ. ಬದಲಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಮಾಜ ಒಡೆಯುವ ಕೆಲಸ ಯಾರೇ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಅಂತಹವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತದೆ ಎಂದು ಖಾದರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ