Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಸಚಿವ ವಿ ಸೋಮಣ್ಣ ರಿಯ್ಯಾಕ್ಷನ್

MUDA Scam

Sampriya

ಶಿವಮೊಗ್ಗ , ಗುರುವಾರ, 26 ಸೆಪ್ಟಂಬರ್ 2024 (16:53 IST)
Photo Courtesy X
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ವೈಯಕ್ತಿಕ ವಿಶ್ವಾಸ ನನಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ಅವಕಾಶ ನೀಡಿ ಹೈಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಎಂದರು.

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋಮಣ್ಣ ಅವರು, ನಾನು ಈ ಹಿಂದೆ ಸಿದ್ದರಾಮಯ್ಯ ಜತೆ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅವರು ತುಂಬಾನೇ ಸೂಕ್ಷ್ಮ ಮನಸ್ಸಿನ ರಾಜಕಾರಣಿ. ಇದೀಗ ಅವರ ವಿರುದ್ಧ ತನಿಖೆಗೆ ಆದೇಶಿಸಿದ್ದು, ಸಿದ್ದರಾಮಯ್ಯ ಇದನ್ನರಿಯಬೇಕಿದೆ.  

ಕಾನೂನು ತನ್ನ ಪಾಡಿಗೆ ತಾನು ಕೆಲಸ ಮಾಡುತ್ತದೆ. ಹೀಗಾಗಿಯೇ ಆ ವಿಷಯದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ' ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

Mahalakshmi Murder Case: ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ಬಿಟ್ಟಿಟ್ಟ ಆರೋಪಿ