Select Your Language

Notifications

webdunia
webdunia
webdunia
webdunia

ಬರಗಾಲ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ

ಬರಗಾಲ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ
ಕೊಪ್ಪಳ , ಶನಿವಾರ, 1 ಸೆಪ್ಟಂಬರ್ 2018 (14:45 IST)
ರಾಜ್ಯದ ಒಂದೆಡೆ ನಿರಂತರ ಮಳೆಗೆ ಜನ ತತ್ತರಿಸಿದ್ದರೆ, ಮತ್ತೊಂದೆಡೆ ಭೀಕರ ಬರಗಾಲ ತಾಂಡವವಾಡುತ್ತಿದೆ. ಬರಗಾಲ ಪೀಡಿತ ಪ್ರದೇಶಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರಗಾಲದ ಛಾಯೇ ಆವರಿಸಿದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್, ಶಂಕರ್, ಬರಗಾಲ ಪ್ರದೇಶಕ್ಕೆ ಭೇಟಿ ನೀಡಿದ್ರು. ಜಿಲ್ಲೆಯ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದ ಬೆಳೆ  ನಾಶವಾದ ಜಮೀನಿಗಳಿಗೆ ತೆರಳಿ ಪರಿಶೀಲನೆ ನಡೆಸಿದ್ರು.

ಜಿಲ್ಲಾಧಿಕಾರಿ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳ ಹತ್ತಿರ ಜಮೀನಿನಲ್ಲಿ ಬರಗಾಲದ ಮಾಹಿತಿ ಪಡೆದ ಸಚಿವರು, ಬೆಳೆ ನಾಶದ ಬಗ್ಗೆ ಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ರು. ಇದೇ ವೆಳೆ ಮಾತನಾಡಿದ ಸಚಿವ ಆರ್. ಶಂಕರ್, ಕೊಪ್ಪಳ ಜಿಲ್ಲೆಯಲ್ಲಿ ಏಳು ತಾಲೂಕುಗಳಲ್ಲಿ ಮಳೆ ಇಲ್ಲದೆ ಸಂಪೂರ್ಣವಾಗಿ ಒಣಗಿ ಹೋಗಿದೆ. ಏಳು ತಾಲೂಕುಗಳಿಗೆ ಕೇಂದ್ರದಿಂದ 100 ಕೋಟಿ ರೂ. ಪರಿಹಾರ ನೀಡಬೇಕು ಎಂದು ನಾನು ಪತ್ರ ಬರೆಯುತ್ತೇನೆ. ಅಲ್ಲದೆ ಕೊಪ್ಪಳ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಸಿಎಂ ಜೊತೆ ಚರ್ಚೆ ಮಾಡ್ತಿನಿ ಎಂದ್ರು.

ಇದೇ ವೆಳೆ ರೈತರು ಸಹ ಕೇವಲ ಸಚಿವರು ಭೇಟಿ ಮಾಡೋದು ಅಷ್ಟೇ ಅಲ್ಲ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಮಾಡುವುದಕ್ಕೆ ಒತ್ತಾಯಿಸುತ್ತಿದ್ದ ಯಜಮಾನನ ವಿಡಿಯೋ ಬಯಲುಮಾಡಿದ ಮಹಿಳೆ