Daily Horoscope

Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

Zameer Ahmed Khan
ಬೆಂಗಳೂರು: ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಶಾಸಕ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಯಾರಿಗೂ ಬೇಡಿಕೆಯಿಟ್ಟಿಲ್ಲ ಎಂದಿದ್ದಾರೆ.

ಜಮೀರ್ ಅಹ್ಮದ್ ಗೆ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ನಿಡಬೇಕು ಎಂದು ಅವರ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇದರ ನಡುವೆ ಸ್ವತಃ ಜಮೀರ್ ಅಹ್ಮದ್, ಕಾಂಗ್ರೆಸ್ ನ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಅವರು ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ ಎಂದು ಸುದ್ದಿಯಾಗಿದೆ.

ಆದರೆ ಸಚಿವ ಸ್ಥಾನಕ್ಕಾಗಿ ನಾನು ಯಾರ ಬಳಿಯೂ ಬೇಡಿಕೆಯಿಟ್ಟಿಲ್ಲ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಬಲಿಗರು ಪ್ರತಿಭಟನೆ ಮಾಡಬೇಕೆಂದು ನಾನು ಹೇಳಿಕೊಟ್ಟಿಲ್ಲ. ನಾನು ಯಾವ ನಾಯಕರಿಗೂ ಸಚಿವ ಸ್ಥಾನ ಕೊಡಿ ಎಂದು ಕೇಳಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ನನಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

ಡಿಕೆ ಸುರೇಶ್ ಅವರನ್ನು ಭೇಟಿ ಮಾಡಿದ್ದರ ಹಿಂದೆಯೂ ಸಚಿವ ಸ್ಥಾನದ ಉದ್ದೇಶವಿಲ್ಲ ಎಂದಿದ್ದಾರೆ. ಡಿಕೆ ಸುರೇಶ್ ನಾನು ಆಗಾಗ ಭೇಟಿಯಾಗುತ್ತಿರುತ್ತೇವೆ. ಬೆಂಗಳೂರಿನಲ್ಲಿದ್ದರೆ ಅವರು ನಮ್ಮ ಮನೆಗೆ ಬರುತ್ತಾರೆ, ನಾನು ಅವರ ಮನೆಗೆ ಹೋಗುತ್ತೇನೆ ಇದರಲ್ಲಿ ವಿಶೇಷವಿಲ್ಲ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video