ಬೆಂಗಳೂರು: ಇತ್ತೀಚೆಗೆ ರಾಜ್ಯ ಬಜೆಟ್ ನಲ್ಲಿ ಸರ್ಕಾರೀ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಆದರೆ ಈಗ ಶೇ.4 ಅಲ್ಲ, ಒಟ್ಟು ಮೀಸಲಾತಿಯನ್ನು ಶೇ.10 ಕ್ಕೆ ಏರಿಕೆ ಮಾಡುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.
ಮುಸ್ಲಿಮರಿಗೆ ಮೀಸಲಾತಿ ಶೇ.10 ರಷ್ಟು ಏರಿಕೆ ಮಾಡುವಂತೆ ಬಂದ ಮನವಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ. ಕೆಲವು ಸಂಘಟನೆಗಳು ಮೀಸಲಾತಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಗೆ ಮನವಿ ಸಲ್ಲಿಸಿದ್ದವು.
ಅದರಂತೆ ಈಗ ಜಮೀರ್ ಅಹ್ಮದ್ ಕ್ರಮ ಕೈಗೊಳ್ಳುವಂತೆ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮುಸ್ಲಿಮರಿಗೆ ಬಿ ಮೀಸಲಾತಿಯನ್ನು ಶೇ.10 ರಷ್ಟು ಏರಿಕೆ ಮಾಡಲು ಮನವಿ ಸಲ್ಲಿಸಲಾಗಿತ್ತು.
ಈ ಬಾರಿ ಬಜೆಟ್ ನಲ್ಲಿ ಮುಸ್ಲಿಮರಿಗೆ ಸಾಕಷ್ಟು ಕೊಡುಗೆ ನೀಡಲಾಗಿತ್ತು. ಇದು ವಿಪಕ್ಷ ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈಗ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿದೆ.