Select Your Language

Notifications

webdunia
webdunia
webdunia
webdunia

ಆಧುನಿಕ ಟಿಪ್ಪು ಸುಲ್ತಾನ್ ಆಗಲು ಸಚಿವ ಜಮೀರ್ ಹೊರಟಿದ್ದಾರೆ: ಅಶೋಕ್‌ ಆರೋಪ

Leader of Opposition R. Ashoka

Sampriya

ಬೆಂಗಳೂರು , ಸೋಮವಾರ, 28 ಅಕ್ಟೋಬರ್ 2024 (14:31 IST)
Photo Courtesy X
ಬೆಂಗಳೂರು: ವಕ್ಫ್‌ ಬೋರ್ಡ್‌ ಮತ್ತು ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ ಎಂದು ಕಿಡಿಕಾರಿದರು.

ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು  ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಹೋಗಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ ಎಂದರು.

ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಮುಖ್ಯಮಂತ್ರಿ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ ಎಂದು ದೂರಿದರು.

ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿಯ ಬಿಡದಿ ತೋಟದ ಮನೆಯಲ್ಲಿ ನಡೆಯಿತು ಆ ಒಂದು ಸೀಕ್ರೆಟ್