Webdunia - Bharat's app for daily news and videos

Install App

ಆಧುನಿಕ ಟಿಪ್ಪು ಸುಲ್ತಾನ್ ಆಗಲು ಸಚಿವ ಜಮೀರ್ ಹೊರಟಿದ್ದಾರೆ: ಅಶೋಕ್‌ ಆರೋಪ

Sampriya
ಸೋಮವಾರ, 28 ಅಕ್ಟೋಬರ್ 2024 (14:31 IST)
Photo Courtesy X
ಬೆಂಗಳೂರು: ವಕ್ಫ್‌ ಬೋರ್ಡ್‌ ಮತ್ತು ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ ಎಂದು ಕಿಡಿಕಾರಿದರು.

ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು  ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಹೋಗಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ ಎಂದರು.

ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಮುಖ್ಯಮಂತ್ರಿ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ ಎಂದು ದೂರಿದರು.

ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments