ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಕುರಿತು ಮತ್ತೆ ಚರ್ಚೆಗಳು ಗರಿಗೆದರಿವೆ.
ಈ ನಡುವೆ ವಿಧಾನ ಪರಿಷತ್ ನೂತನ ಸದಸ್ಯ ಹಾಗೂ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೆಸರು ಸಚಿವ ಸ್ಥಾನಕ್ಕೆ ಕೇಳಿಬರತೊಡಗಿದೆ.
ಹೆಚ್.ವಿಶ್ವನಾಥ್ ರಿಗೆ ಸಚಿವ ಸ್ಥಾನ ಕೊಡುವ ತೀರ್ಮಾನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪನವರು ಮಾಡಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ವಿವಿಧ ನಿಗಮ - ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.