Publish Date: Tue, 18 Jul 2017 (09:27 IST)
Updated Date: Tue, 18 Jul 2017 (09:32 IST)
ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಖಾತೆ ಬದಲಾಯಿಸುವಂತೆ 30ಕ್ಕೂ ಅಧಿಕ ಶಾಸಕರು ಮತ್ತು ಸಚಿವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
ಬಿಇಓಗಳ ವರ್ಗಾವಣೆ ವಿಚಾರದಲ್ಲಿ ತನ್ವೀರ್ ಸೇಠ್ ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರು ಖಾತೆ ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಾದ ರಮಾನಾಥ್ ರೈ, ಎಚ್. ಆಂಜನೇಯ, ಶಾಸಕರಾದ ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಸೇರಿದಂತೆ ಹಲವು ಶಾಸಕರು ಖಾತೆ ಬದಲಾವಣೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸಿಎಂ ಖಾತೆ ಬದಲಾವಣೆಗೆ ಮುಂದಾಗುತ್ತಾರಾ..? ಸಚಿವರು ಮತ್ತು ಶಾಸಕರ ಮಾತಿಗೆ ಮಣಿಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ