Publish Date: Sun, 08 Jul 2018 (11:28 IST)
Updated Date: Sun, 08 Jul 2018 (11:30 IST)
ಮಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸೋಲಿಸಲು ಒಂದಾಗಿರುವ ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ ‘ಪ್ರಧಾನಿ ಮೋದಿಯನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ. ಅವರನ್ನು ಸೋಲಿಸುತ್ತೇವೆಂದು ಹೊರಟಿರುವ ತೃತೀಯ ರಂಗವೇ ಛಿದ್ರವಾಗಿದೆ’ ಎಂದಿದ್ದಾರೆ.
ಇದರ ಜತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ‘ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿರುವವರು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಇಷ್ಟೊಂದು ಮಳೆಯಾಗುತ್ತಿದ್ದರೂ ಇನ್ನೂ ಒಂದೇ ಒಂದು ಸಭೆ ನಡೆಸಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ’ ಎಂದು ಅವರು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.