Webdunia - Bharat's app for daily news and videos

Install App

ವಿಮಾನಗಳು, ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತವನ್ನು ಹಾಕಲು ಸಚಿವಾಲಯದ ಒತ್ತಾಯ

Webdunia
ಗುರುವಾರ, 30 ಡಿಸೆಂಬರ್ 2021 (20:58 IST)
ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳನ್ನು ತಮ್ಮ ವಿಮಾನಗಳಲ್ಲಿ ಮತ್ತು ದೇಶದ ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತವನ್ನು ನುಡಿಸುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ಒತ್ತಾಯಿಸಿದೆ. ಭಾರತೀಯ ಸಾಂಸ್ಕೃತಿಕ ಸಂಶೋಧನಾ ಮಂಡಳಿಯ ವಿನಂತಿಯ ಮೇರೆಗೆ ಈ ಮನವಿ ಮಾಡಲಾಗಿದೆ ಎಂದು ತಿಳಿಸಿದೆ.
“ಜಗತ್ತಿನಾದ್ಯಂತದ ಹೆಚ್ಚಿನ ವಿಮಾನಯಾನ ಸಂಸ್ಥೆಗಳು ತಮ್ಮ ದೇಶಕ್ಕೆ ಸಂಬಂಧಿಸಿದ ಸಂಗೀತವನ್ನು ಪ್ಲೇ ಮಾಡಲಾಗುತ್ತದೆ. ಉದಾಹರಣೆಗೆ ಅಮೆರಿಕನ್ ಏರ್‌ಲೈನ್ಸ್‌ನಲ್ಲಿ ಜಾಝ್, ಆಸ್ಟ್ರಿಯನ್ ಏರ್‌ಲೈನ್ಸ್‌ನಲ್ಲಿ ಮೊಜಾರ್ಟ್ ಮತ್ತು ಮಧ್ಯಪ್ರಾಚ್ಯದ ವಿಮಾನಯಾನದಲ್ಲಿ ಅರಬ್ ಸಂಗೀತ ನುಡಿಸಲಾಗುತ್ತದೆ” ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಸಚಿವಾಲಯ ಜಂಟಿ ಕಾರ್ಯದರ್ಶಿ ಉಷಾ ಪಾಧಿ ಅವರು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮುಖ್ಯಸ್ಥ ಅರುಣ್ ಕುಮಾರ್ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ಸಂಜೀವ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ, “ಭಾರತೀಯ ವಿಮಾನಯಾನ ಸಂಸ್ಥೆಗಳು ವಿಮಾನದಲ್ಲಿ ಭಾರತೀಯ ಸಂಗೀತವನ್ನು ತುಂಬಾ ಅಪರೂಪಕ್ಕೆ ನುಡಿಸುತ್ತವೆ, ಆದರೆ ನಮ್ಮ ಸಂಗೀತವು ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯನ್ನು ಹೊಂದಿದೆ. ಪ್ರತಿಯೊಬ್ಬ ಭಾರತೀಯನು ಅದರ ಬಗ್ಗೆ ನಿಜವಾಗಿಯೂ ಹೆಮ್ಮೆಪಡುತ್ತಾರೆ” ಎಂದು ತಿಳಿಸಿದ್ದಾರೆ.
“ಭಾರತದ ವಿಮಾನಯಾನ ಸಂಸ್ಥೆಗಳು ಸಾಮಾನ್ಯವಾಗಿ ವಿದೇಶಿ ಸಂಗೀತವನ್ನು ಮಾತ್ರ ನುಡಿಸುವುದನ್ನು ನಾವು ನೋಡಿದ್ದೇವೆ, ಅದನ್ನು ಯಾರೂ ಆನಂದಿಸಲು ಸಾಧ್ಯವಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಭಾರತೀಯ ಸಂಗೀತವನ್ನು ವಿಮಾನಗಳಲ್ಲಿ, ವಿಮಾನ ನಿಲ್ದಾಣಗಳಲ್ಲಿ ಪ್ಲೇ ಮಾಡುವುದನ್ನು ಕಡ್ಡಾಯಗೊಳಿಸಿದರೆ ಅದು ಜನರನ್ನು ತಲುಪುತ್ತದೆ ಎಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments