Publish Date: Fri, 31 Dec 2021 (09:37 IST)
Updated Date: Fri, 31 Dec 2021 (09:38 IST)
ಬೆಂಗಳೂರು: ಆತ್ಮಗಳ ಜೊತೆ ಮಾತನಾಡುತ್ತೇನೆ ಎಂದು ವಿಚಿತ್ರವಾಗಿ ನಡೆದುಕೊಳ್ಳುತ್ತಿದ್ದ ಅಪ್ರಾಪ್ತ ಹುಡುಗಿ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಅಕ್ಟೋಬರ್ 31 ರಿಂದ ಬಾಲಕಿ ನಾಪತ್ತೆಯಾಗಿದ್ದಾಳೆ. ಇದಕ್ಕಿಂತ ಮೊದಲು ಆತ್ಮಗಳ ಜೊತೆ ಮಾತನಾಡುತ್ತೇನೆ ಎಂದು ವಿಚಿತ್ರವಾಗಿ ನಡೆದುಕೊಳ್ಳುತ್ತಿದ್ದಳು. ಮನೆಯಲ್ಲಿ ಏಕಾಂತವಾಗಿ ಕೂತಿರುತ್ತಿದ್ದಳು. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಕೊನೆಗೆ ಎರಡು ಜೊತೆ ಬಟ್ಟೆ 2,500 ರೂ.ಗಳೊಂದಿಗೆ ಮನೆ ಬಿಟ್ಟಿದ್ದಾಳೆ.
ಆಕೆಯನ್ನು ಹುಡುಕಿ ಬೇಸತ್ತ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ. ಆಧ್ಯಾತ್ಮದ ಕಡೆಗೆ ಒಲವು ಮೂಡಿ ಮನೆ ಬಿಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ.