ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಪುಟ್ಟ ಬಾಲಕಿಯ ಮೇಲೆ ನೃತ್ಯ ತರಬೇತುದಾರ ಲೈಂಗಿಕ ದೌರ್ಜನ್ಯ ನಡೆಸಿದ ಹೇಯ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.
ಆರೋಪಿಯನ್ನು ನೃತ್ಯ ತರಬೇತುದಾರ ಪೀಟರ್(22) ಎಂದು ಗುರುತಿಸಲಾಗಿದ್ದು ತರಬೇತಿ ಸಂದರ್ಭದಲ್ಲಿ ಆತ 4 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಮೇ 3 ರಂದು ನಡೆದ ಘಟನೆ ಬಹಳ ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಶಾಲೆಯೊಂದರಲ್ಲಿ ಮೂರು ವಾರಗಳ ಶಿಬಿರವನ್ನು ಆಯೋಜಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಬಿರದ ಆಯೋಜಕ ಭರತ್ ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.