Publish Date: Tue, 12 Dec 2017 (14:47 IST)
Updated Date: Tue, 12 Dec 2017 (14:49 IST)
ಅಪ್ರಾಪ್ತ ಪ್ರೇಮಿಗಳಿಬ್ಬರು ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾನವಿ (16) ಮತ್ತು ಗಿರೀಶ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಆತ್ಮಹತ್ಯೆಗೂ ಮುನ್ನ ಮರಣಪತ್ರ ಬರೆದು ಇಬ್ಬರನ್ನು ಮರಣೋತ್ತರ ಪರೀಕ್ಷೆ ಮಾಡದೇ ಒಂದೇ ಕುಣಿಗೆ ಹಾಕಿ ಎಂದು ತಮ್ಮ ಕೊನೆಯ ಆಸೆಯನ್ನು ಬರೆದಿಟ್ಟಿದ್ದಾರೆ.
ಪಿಯುಸಿ ವಿದ್ಯಾರ್ಥಿಯಾಗಿ ಗಿರೀಶ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿರುವ ಗಾನವಿ, ಗ್ರಾಮದ ಹೊರವಲಯದಲ್ಲಿ ಹುಣಸೆ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತ ದೇಹಗಳನ್ನ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.