ಜಗಳವಾಡಿದ್ದಕ್ಕೆ ಸ್ನೇಹಿತನನ್ನೇ ಕಿಡ್ನಾಪ್ ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು

Webdunia
ಗುರುವಾರ, 24 ಜನವರಿ 2019 (06:48 IST)
ಬೆಂಗಳೂರು : ಶಾಲೆಯ ವಾರ್ಷಿಕೋತ್ಸವದ ದಿನ ಜಗಳ ಮಾಡಿದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಆತನ  ಆರು ಜನ ಸ್ನೇಹಿತರು ಅಪಹರಿಸಿ ಹಿಂಸೆ ನೀಡಿದ ಘಟನೆ ಬೆಂಗಳೂರಿನ ರಾಜಗೋಪಾಲ ನಗರದಲ್ಲಿ ನಡೆದಿದೆ.




ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ .19ರಂದು ಸಂಜೆ 7.30ಕ್ಕೆ ಮನೆಯ ಸಮೀಪದಲ್ಲಿರುವ ಖಾಸಗಿ ಶಾಲೆಯ ವಾರ್ಷಿಕೋತ್ಸವಕ್ಕೆ ಹೋಗಿದ್ದ. ಅಲ್ಲಿ ಈತನಿಗೂ ಮತ್ತು ಸ್ನೇಹಿತರಿಗೂ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ.


ಎರಡು ದಿನಗಳ ಬಳಿಕ, ಸೋಮವಾರ (.21) ಸಂಜೆ 4.30ಕ್ಕೆ ಸಂತ್ರಸ್ತ ವಿದ್ಯಾರ್ಥಿ ಕಾಲೇಜು ಮುಗಿಸಿಕೊಂಡು ಗೇಟಿನ ಬಳಿ ನಿಂತಿದ್ದ ವೇಳೆ ಓಮ್ನಿ ವ್ಯಾನ್ ನಲ್ಲಿ ಬಂದ ಆರು ಜನ ಸ್ನೇಹಿತರು ಬಲವಂತವಾಗಿ ಆತನನ್ನು ವ್ಯಾನ್ ನೊಳಗೆ ಕೂರಿಸಿಕೊಂಡು ಸಮೀಪದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಕಾಂಪೌಂಡ್ ವೊಂದರ ಬಳಿ ಕೂಡಿ ಹಾಕಿ ಹಿಂಸೆ ನೀಡಿದ್ದಾರೆ.

 

ಅವರಿಂದ ಹೇಗೋ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿ ಮನೆಗೆ ತೆರಳಿ ಪಾಲಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾನೆ. ನಂತರ ಪಾಲಕರು ಹಾಗೂ ವಿದ್ಯಾರ್ಥಿ ರಾಜಗೋಪಾಲನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ವಿದ್ಯಾರ್ಥಿ ನೀಡಿದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು 6 ಮಂದಿ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಾಲಮಂದಿರಕ್ಕೆ ಕಳುಹಿಸುವುದಾಗಿ  ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

           

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments