Select Your Language

Notifications

webdunia
webdunia
webdunia
webdunia

ವಂದೇ ಭಾರತ್ ರೈಲಿಗೆ ಕಲ್ಲು ತೂರಿದ ಕಿಡಿಗೇಡಿಗಳು

ವಂದೇ ಭಾರತ್ ರೈಲಿಗೆ ಕಲ್ಲು ತೂರಿದ ಕಿಡಿಗೇಡಿಗಳು
ಬೆಂಗಳೂರು , ಭಾನುವಾರ, 26 ಫೆಬ್ರವರಿ 2023 (12:36 IST)
ಬೆಂಗಳೂರು : ದುಷ್ಕರ್ಮಿಗಳು ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಬೆಂಗಳೂರಿನ ಕೆಆರ್ ಪುರ- ಕಂಟೋನ್ಮೆಂಟ್ ನಡುವೆ ನಡೆದಿದೆ.
 
ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಚೆನೈ- ಬೆಂಗಳೂರು- ಮೈಸೂರು ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಲ್ಲು ಎಸೆದ ರಭಸಕ್ಕೆ ರೈಲಿನ ಗಾಜುಗಳಿಗೆ ಹಾನಿಯಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಕಂಟ್ರೋಲ್ ಗೆ ಮಾಹಿತಿ ರವಾನೆ ಮಾಡಲಾಗಿದ್ದು, ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರೀಕ್ಷೆಯಲ್ಲಿ ಸಮಯ ನಿರಾಕರಿಸಿದ್ದಕ್ಕೆ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು!