Select Your Language

Notifications

webdunia
webdunia
webdunia
webdunia

ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಅನಾಹುತ

ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಅನಾಹುತ
ಬೆಂಗಳೂರು , ಗುರುವಾರ, 13 ಏಪ್ರಿಲ್ 2023 (13:13 IST)
ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
 
ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ  ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದಾರೆ.

ಈ ವೇಳೆ ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಸದ್ಯ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಗಲಭೆಯ ಬಗ್ಗೆ ಎಲೋನ್ ಮಸ್ಕ್ ಹೇಳಿದ್ದೇನು?