Publish Date: Fri, 31 Jul 2026 (20:51 IST)
Updated Date: Fri, 31 Jul 2026 (20:56 IST)
ನವದೆಹಲಿ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದಾರೆ. ಈ ಸಂಬಂಧ ಅವರು ನೋಟಿಸ್ ಅನ್ನು ಸಲ್ಲಿಕೆ ಮಾಡಿದ್ದಾರೆ.
ಸದನದಲ್ಲಿ ಚರ್ಚೆಯ ವೇಳೆ, ಇತ್ತೀಚೆಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ಸಚಿವ ಸಿಂಗ್ ಹೇಳಿದ್ದರು. ಇನ್ನೂ ಅವರು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿ, ಸದನದ ದಾರಿ ತಪ್ಪಿಸುತ್ತಿದ್ದಾರೆಂದು ವೇಣುಗೋಪಾಲ್ ಆರೋಪ ಮಾಡಿದರು.
ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿರುವ ವಿಷಯವನ್ನು ಅವರು ಎಕ್ಸ್ನಲ್ಲಿಯೂ ಹಂಚಿಕೊಂಡಿದ್ದಾರೆ.
ಈ ಕುರಿತು ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ. ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ನೀಡಿದ ಹೇಳಿಕೆಯು ವಾಸ್ತವಿಕ ಸಂಗತಿಗಳಿಗೆ ಸಂಪೂರ್ಣ ವಿರುದ್ಧವಾಗಿದೆ. ಸದನದ ದಾರಿ ತಪ್ಪಿಸುವುದು ಹಕ್ಕುಚ್ಯುತಿ ಹಾಗೂ ಸದನಕ್ಕೆ ಮಾಡುವ ಅವಮಾನವಾಗುತ್ತದೆ ಎಂದು ಅವರು ನೋಟಿಸ್‌ನಲ್ಲಿ ವಿವರಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ