Select Your Language

Notifications

webdunia
webdunia
webdunia
webdunia

ಬಿಜೆಪಿ ಟಿಕೆಟ್ ಮಿಸ್: ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ

LokhSabha Election 2024

Sampriya

ಕೊಪ್ಪಳ , ಮಂಗಳವಾರ, 16 ಏಪ್ರಿಲ್ 2024 (20:02 IST)
ಕೊಪ್ಪಳ: ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ರಾಜೀನಾಮೆ ಕೊಟ್ಟಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿ ಬೇಸರಗೊಂಡಿದ್ದ ಸಂಗಣ್ಣ ಕರಡಿ ಅವರು ಇಂದು ಸಂಜೆ ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನ ಹೊರಹಾಕಿದ್ದ ಅವರು ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು.

ಇನ್ನೂ ಇವರನ್ನು ಸಮಾಧಾನ ಪಡಿಸಲು ಬಿಜೆಪಿ ನಾಯಕ  ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಪ್ರಯತ್ನ ಪಟ್ಟಿದ್ದರು. ಅದಲ್ಲದೆ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡನಿಂದ ಕಸಿದು ಹೆಂಡತಿಗೆ ನೀಡುವುದೇ ಸಿದ್ದು ಗ್ಯಾರಂಟಿ: ಸಿ ಟಿ ರವಿ ವ್ಯಂಗ್ಯ