Select Your Language

Notifications

webdunia
webdunia
webdunia
webdunia

ಮಿಸ್ ಯೂನಿವರ್ಸಿ ಮತ್ತೆ ಭಾರತಕ್ಕೆ

ಮಿಸ್ ಯೂನಿವರ್ಸಿ ಮತ್ತೆ ಭಾರತಕ್ಕೆ
ಬೆಂಗಳೂರು , ಸೋಮವಾರ, 13 ಡಿಸೆಂಬರ್ 2021 (16:59 IST)

2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ, 1994 ಸುಶ್ಮಿತಾ ಸೇನ್ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು. ಬರೋಬ್ಬರಿ 21 ವರ್ಷಗಳ ನಂತರ ಭಾರತಕ್ಕೆ ವಿಶ್ವ ಸುಂದರಿ ಪಟ್ಟ ದೊರೆತಿದೆ.

ಇಸ್ರೇಲ್‍ನ ಐಲಾಟ್‍ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಹರ್ನಾಜ್ ಕೌರ್ ಸಂಧು ವಿಶ್ವ ಸುಂದರಿ ಪಟ್ಟದ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೆಕ್ಸಿಕೋ ದೇಶದ 2020ರ ಮಾಜಿ ಭುವನ ಸುಂದರಿ ಆಂಡ್ರಿಯಾ ಮೆಜಾ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸಂಧು ಅವರಿಗೆ ಕಿರೀಟ ತೊಡಿಸಿದರು. ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರವಾಗಿದೆ. 21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವ ಸುಂದರಿ ಪಟ್ಟ ಬಂದಿದೆ.

ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರು ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಟಾಪ್ ಮೂರು ಸುತ್ತುಗಳಲ್ಲಿ ಸ್ಪರ್ಧಿಗಳಿಗೆ ಇಂದಿನ ಮಹಿಳೆಯರು ಎದುರಿಸುತ್ತಿರುವ ಒತ್ತಡಗಳನ್ನು ಹೇಗೆ ನಿಭಾಯಿಸಬಹುದು ಎಂದು ನೀವು ಹೇಳುತ್ತೀರಿ ಎಂದು ಕೇಳಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ಭಾರತದ ಹರ್ನಾಸ್ ಸಂಧು, ಇಂದಿನ ಯುವಜನತೆ ಎದುರಿಸುತ್ತಿರುವ ದೊಡ್ಡ ಒತ್ತಡವೆಂದರೆ ತಮ್ಮಲ್ಲಿ ನಂಬಿಕೆ ಇಡಬೇಕಾಗಿರುವುದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಐವರು ಆತ್ಮಹತ್ಯೆ ಪ್ರಕರಣ ರೋಚಕ ತಿರುವು