Select Your Language

Notifications

webdunia
webdunia
webdunia
webdunia

ಶಾ ಭೇಟಿಗೆ ಸಿಗದ ಅವಕಾಶ, ಸ್ಪರ್ಧೆ ಮಾಡಿಯೇ ಸಿದ್ಧವೆಂದ ಈಶ್ವರಪ್ಪ

ಶಾ ಭೇಟಿಗೆ ಸಿಗದ ಅವಕಾಶ, ಸ್ಪರ್ಧೆ ಮಾಡಿಯೇ ಸಿದ್ಧವೆಂದ ಈಶ್ವರಪ್ಪ

Sampriya

ಬೆಂಗಳೂರು , ಗುರುವಾರ, 4 ಏಪ್ರಿಲ್ 2024 (10:11 IST)
Photo Courtesy X
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದು, ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ್ಮ ಪುತ್ರ ಕಾಂತರಾಜುಗೆ ಅವಕಾಶ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಸಾರಿರುವ ಬಿಜೆಪಿ ಮುಖಂಡ ಈಶ್ವರಪ್ಪ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಬುಧವಾರ ದೆಹಲಿಗೆ ತೆರಳಿದ್ದರು. ಆದರೆ, ಅಮಿತ್ ಶಾ ಭೇಟಿ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಜೊತೆ ಸಭೆ ಸಾಧ್ಯವಾಗದಿರುವುದಕ್ಕೆ ದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ ಅವರು, ಬುಧವಾರ ರಾತ್ರಿ 10 ಗಂಟೆಯ ನಂತರ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎನ್ನುವ ಮಾಹಿತಿ ಬಂದಿದೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ಕಿಡಿಹಾರಿದರು. ಈ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಸಿದ್ಧ ಎಂದು ಸಂದೇಶ ರವಾನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ಪ್ರಧಾನಿ ಮಾಡುತ್ತೇನೆಂದರೂ ನಾನು ಹೋಗಲ್ಲ: ಸಿಎಂ ಸಿದ್ದರಾಮಯ್ಯ