Webdunia - Bharat's app for daily news and videos

Install App

ಶಾ ಭೇಟಿಗೆ ಸಿಗದ ಅವಕಾಶ, ಸ್ಪರ್ಧೆ ಮಾಡಿಯೇ ಸಿದ್ಧವೆಂದ ಈಶ್ವರಪ್ಪ

Sampriya
ಗುರುವಾರ, 4 ಏಪ್ರಿಲ್ 2024 (10:11 IST)
Photo Courtesy X
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದು, ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ್ಮ ಪುತ್ರ ಕಾಂತರಾಜುಗೆ ಅವಕಾಶ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಸಾರಿರುವ ಬಿಜೆಪಿ ಮುಖಂಡ ಈಶ್ವರಪ್ಪ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಬುಧವಾರ ದೆಹಲಿಗೆ ತೆರಳಿದ್ದರು. ಆದರೆ, ಅಮಿತ್ ಶಾ ಭೇಟಿ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಜೊತೆ ಸಭೆ ಸಾಧ್ಯವಾಗದಿರುವುದಕ್ಕೆ ದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ ಅವರು, ಬುಧವಾರ ರಾತ್ರಿ 10 ಗಂಟೆಯ ನಂತರ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎನ್ನುವ ಮಾಹಿತಿ ಬಂದಿದೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ಕಿಡಿಹಾರಿದರು. ಈ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಸಿದ್ಧ ಎಂದು ಸಂದೇಶ ರವಾನಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments