Publish Date: Mon, 07 Oct 2024 (18:19 IST)
Updated Date: Mon, 07 Oct 2024 (18:23 IST)
ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿ, ದೂರು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣವು ತಮ್ಮ ಸ್ಥಾನಕ್ಕೆ ದೊಡ್ಡ ಸಂಕಷ್ಟ ತಂದಿದ್ದು, ಇದೀಗ ಸಚಿವ ಭೈರತಿ ಸುರೇಶ್ ಅವರಿಗೂ ಬಿಸಿ ಮುಟ್ಟುವ ಸಾಧ್ಯತೆಯಿದೆ. ಿನ್ನೂ ಕಡತ ನಾಪತ್ತೆ ಪ್ರಕರಣ ಸಂಬಂಧ ಲೋಕಾಯುಕ್ತದ ಈ ಹಿಂದಿನ ಎಸ್‌ಪಿ ಸುಜಿತ್ ವಿರುದ್ಧವೂ ದೂರು ನೀಡಿದ್ದಾರೆ.
ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಜುಲೈ 26ರಂದು ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ದಾಖಲೆ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಆ ದಾಖಲೆಗಳನ್ನು ಇಟ್ಟುಕೊಂಡು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದಾರೆ. ದಾಖಲೆಗಳನ್ನು ತೆಗೆದುಕೊಂಡು ಹೋಗಲು ಲೋಕಾಯುಕ್ತ ಎಸ್‌ಪಿ ಕೂಡಾ ಸಹಕರಿಸಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.