ಕಾಣೆಯಾಗಿದ್ದ PUC ವಿದ್ಯಾರ್ಥಿನಿಯರು ಪತ್ತೆ !

Webdunia
ಬುಧವಾರ, 27 ಜುಲೈ 2022 (12:52 IST)
ರಾಯಚೂರು : ನಗರದಿಂದ ಕಾಣೆಯಾಗಿದ್ದ ನಾಲ್ವರು ಪಿಯುಸಿ ವಿದ್ಯಾರ್ಥಿನಿಯರು ಕೊನೆಗೂ ಪತ್ತೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರು ಈಗಾಗಲೇ ರಾಯಚೂರಿಗೆ ಬಂದಿದ್ದಾರೆ, ಇನ್ನಿಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಕರೆತರುತ್ತಿದ್ದಾರೆ.

ಇದರಿಂದ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.  ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎನ್ನುವ ಹಾಗೇ ಹೇಳದೇ ಕೇಳದೆ ಮನೆ ಬಿಟ್ಟು ಹೋಗಿದ್ದ ರಾಯಚೂರಿನ ನಾಲ್ವರು ಅಪ್ರಾಪ್ತೆಯರು ಕೊನೆಗೂ ಪತ್ತೆಯಾಗಿದ್ದಾರೆ.

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. 

ಜುಲೈ 23 ರಂದು ತಮ್ಮ ಮನೆಗಳಿಂದ ಹೊರಟ ವಿದ್ಯಾರ್ಥಿನಿಯರು ಅತ್ತ ಕಾಲೇಜಿಗೂ ಹೋಗದೇ, ಇತ್ತ ಮನೆಗೂ ವಾಪಸ್ ಆಗದೆ ಕಾಣೆಯಾಗಿದ್ದರು. ವಿಜ್ಞಾನ ವಿಭಾಗದ ಮೂವರು ಹಾಗೂ ವಾಣಿಜ್ಯ ವಿಭಾಗದ ಓರ್ವ ವಿದ್ಯಾರ್ಥಿನಿ ಮನೆಬಿಟ್ಟು ಹೋಗಿದ್ದರು.
ಇದರಲ್ಲಿ ಇಬ್ಬರು ಶಕ್ತಿನಗರ ಮತ್ತು ಇನ್ನಿಬ್ಬರು ರಾಯಚೂರು ನಗರದ ವಿದ್ಯಾರ್ಥಿನಿಯರೇ ಆಗಿದ್ದರು.

ವಿದ್ಯಾರ್ಥಿನಿಯರ ಪತ್ತೆ ಕಾರ್ಯಕ್ಕೆ ಎರಡು ವಿಶೇಷ ಪೊಲೀಸ್ ತನಿಖಾ ತಂಡ ರಚಿಸಲಾಗಿತ್ತು. ಕಾಲೇಜಿನಲ್ಲೂ ವಿದ್ಯಾರ್ಥಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಕಳೆದ ನಾಲ್ಕು ದಿನಗಳಿಂದ ಗೈರಾಗಿದ್ದಾರೆ ಎಂದು ಪ್ರಾಂಶುಪಾಲ ಚಂದ್ರಶೇಖರ ತಿಳಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments