ಸರಕಾರದ ಒನ್ ಕ್ಲಾಸ್, ಒನ್ ಚಾನಲ್ ಯೋಜನೆಗೆ ತಜ್ಞರಿಂದ ಮಿಶ್ರ ಪ್ರತಿಕ್ರಿಯೆ

Webdunia
ಬುಧವಾರ, 2 ಫೆಬ್ರವರಿ 2022 (21:00 IST)
ಕೋವಿಡ್ ಸಾಂಕ್ರಾಮಿಕದ ಸಂದರ್ಭದ ಲಾಕ್ ಡೌನ್ ಗಳ ವೇಳೆ ಶಾಲೆಗಳನ್ನು ಮುಚ್ಚಿದ್ದರಿಂದ  ಉಂಟಾಗಿರುವ ಕಲಿಕಾ ನಷ್ಟವನ್ನು ಸರಿದೂಗಿಸಲೆಂದು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಿಸಿರುವ ʼಒನ್ ಕ್ಲಾಸ್, ಒನ್ ಚಾನಲ್ʼ ಯೋಜನೆಗೆ ತಜ್ಞರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಂದರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪ್ರತಿ ತರಗತಿಗೆಂದು ಒಂದು ಚಾನೆಲ್  ಆರಂಭಿಸಲಾಗುವುದು. ಪೂರಕ ಕಲಿಕೆಗೆ ಅವಕಾಶವೊದಗಿಸುವ ಚಾನಲ್ ಗಳ ಸಂಖ್ಯೆಯನ್ನು 12ರಿಂದ 200ಕ್ಕೆ ಏರಿಕೆ ಮಾಡಲಾಗುವುದು, ಈ ಚಾನೆಲ್ ಗಳ ಮೂಲಕ ಪ್ರಾದೇಶಿಕ ಮತ್ತು ಆಯಾಯ ರಾಜ್ಯಗಳ ಪಠ್ಯಕ್ರಮ ಆಧರಿತ ಶಿಕ್ಷಣ ಒದಗಿಸಲಾಗುವುದು, ಎಂದು ಸಚಿವೆ ಹೇಳಿದ್ದಾರೆ.
ಆದರೆ ಸರಕಾರದ ಈ ಪ್ರಸ್ತಾವನೆಯನ್ನು ಕೆಲ ತಜ್ಞರು ಸ್ವಾಗತಿಸಿದ್ದಾರಾದರೂ ಇನ್ನು ಕೆಲವರು ಟೀಕಿಸಿದ್ದಾರೆ. ಖ್ಯಾತ ಸಾಂಕ್ರಾಮಿಕ ರೋಗಗಳ ತಜ್ಞ  ಹಾಗೂ ದಿಲ್ಲಿಯಲ್ಲಿ ಶಾಲೆಗಳನ್ನು ಪುನರಾರಂಭಿಸಬೇಕೆಂದು ಸರಕಾರದ ಮೇಲೆ ಒತ್ತಡ ಹೇರಿದ್ದ ಪೋಷಕರ ಸಂಘದ ಭಾಗವಾಗಿರುವ ಡಾ ಚಂದ್ರಕಾಂತ್ ಲಹರಿಯಾ ಪ್ರತಿಕ್ರಿಯಿಸಿ, "ಟಿವಿ ಚಾನಲ್ ಆಧರಿತ ಶಿಕ್ಷಣವು  ಕಲಿಕಾ ನಷ್ಟಕ್ಕೆ ಪರಿಹಾರವಲ್ಲ, ನಮ್ಮ ಮಕ್ಕಳು ಎದುರಿಸಿದ ಕಲಿಕಾ ನಷ್ಟದ ಬಗ್ಗೆ ನಾವು ಗಂಭೀರವಾಗಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಈ ರೀತಿ ಹೂಡಿಕೆ ಮಾಡುವುದಕ್ಕಿಂತ ಶಾಲಾ ಶಿಕ್ಷಣದಲ್ಲಿ ಹೂಡಿಕೆ ಮಾಡಿ" ಎಂದು ಟ್ವೀಟ್ ಮಾಡಿದ್ದಾರೆ.
ಮಕ್ಕಳು ಎದುರಿಸಿದ ಕಲಿಕಾ ನಷ್ಟಗಳಿಗೆ ಹೋಲಿಸಿದಾಗ ಸರಕಾರದ ಕ್ರಮ ಅತ್ಯಲ್ಪ ಎಂದು ಐಐಎಂ ಅಹ್ಮದಾಬಾದ್ ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ತರುಣ್ ಜೈನ್ ಹೇಳಿದರೆ, ಐಸಿಸಿಆರ್ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ಪ್ರತಿಕ್ರಿಯಿಸಿ ಇದೊಂದು ವಿನೂತನ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments