ಬಿಸಿಲೂರಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Webdunia
ಮಂಗಳವಾರ, 8 ಜನವರಿ 2019 (17:30 IST)
ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಬಂದ್ ಗೆ ಕಲಬುರ್ಗಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ  ಕಲಬುರಗಿಯಲ್ಲಿ ರೈತ ಸಂಘಟನೆ ಮತ್ತು ಎಡ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ.  ಬಂದ್ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪೆಟ್ರೋಲ್ ಬಂಕ್ ಗಳು ಮುಚ್ಚಲ್ಪಟ್ಟಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಉಳಿದಂತೆ ಆಟೋ ಸಂಚಾರ, ಇತರೆ ವಾಹನ ಸಂಚಾರ ಎಂದಿನಂತಿತ್ತು. ಬಂದ್ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಛೇರಿ ಎದುರು ಜಾಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  

ಹಿಂದುಳಿದ ಹೈ.ಕ. ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಹೆಚ್ಚುವರಿ ಅನುದಾನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇಂದು ಜಿಲ್ಲಾಧಿಕಾರಿ ಕಛೇರಿ ಎದುರೇ ವಾಸ್ತವ್ಯ ಹೂಡಿ, ನಾಳೆ ಹೋರಾಟ ಮುಂದುವರೆಸಲಾಗುವುದು. ನಾಳೆ ಬೆಳಿಗ್ಗೆ ರೈಲು ರೋಖೋ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸುವುದಾಗಿ ಮುಖಂಡರು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments