Publish Date: Tue, 22 Jan 2019 (09:03 IST)
Updated Date: Tue, 22 Jan 2019 (09:05 IST)
ಬೆಂಗಳೂರು : ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿಜಯನಗರ ಶಾಸಕರಾದ ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆದ ರಾಜ್ಯ ನಾಯಕರು ಸೋಮವಾರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.
ಹಾಗೇ ಪ್ರಕರಣದ ತನಿಖೆ ನಡೆಸಲು ಡಿಸಿಎಂ ಪರಮೇಶ್ವರ್, ಕೆ.ಜೆ ಜಾರ್ಜ್, ಕೃಷ್ಣಭೈರೇಗೌಡ ಅವರನ್ನೊಳಗೊಂಡ ವಿಶೇಷ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಈ ಸಮಿತಿ ಆದಷ್ಟು ಶೀಘ್ರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.