ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಜೈಲು ಪಾಲಾಗ್ತಾರಾ ಕಂಪ್ಲಿ ಶಾಸಕ ಗಣೇಶ್

Webdunia
ಗುರುವಾರ, 21 ಫೆಬ್ರವರಿ 2019 (12:02 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಗಣೇಶ್ ಅವರನ್ನು ಬಿಡದಿ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.


ಶಾಸಕ ಆನಂದ್ ಸಿಂಗ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಕಂಪ್ಲಿ ಶಾಸಕ ಗಣೇಶ್ ಮೇಲೆ ಐಪಿಸಿ ಸೆಕ್ಷನ್ 307 ರ ಅಡಿ ಕೇಸ್ ದಾಖಲಾಗಿತ್ತು. ಅವರ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದ ಹಿನ್ನಲೆಯಲ್ಲಿ, ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಹೀಗಾಗಿ ಅವರನ್ನು ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಅಲ್ಲದೇ ಹಲ್ಲೆ ನಡೆಸಿದ ಬಳಿಕ ಗಣೇಶ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ, ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಬಳಿಕ ಜಾಮೀನು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದರು. ಸದ್ಯ ಪೊಲೀಸ್ ವಶದಲ್ಲಿರುವ ಗಣೇಶ್ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ಮುಂದಿನ ಸುದ್ದಿ
Show comments