Publish Date: Sat, 11 Nov 2017 (17:32 IST)
Updated Date: Sat, 11 Nov 2017 (17:34 IST)
ಟಿಪ್ಪು ಜಯಂತಿ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ಹೋರಾಟ ನಡೆಸುತ್ತಿದ್ದರೆ ಬಿಜೆಪಿ ಶಾಸಕ ಆನಂದ್ ಸಿಂಗ್ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿರುವುದು ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಿಜೆಪಿ ಪಕ್ಷದ ಶಿಸ್ತು ಸಮಿತಿ ಶಾಸಕ ಆನಂದ್ ಸಿಂಗ್‌ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಒಂದು ವಾರದೊಳಗೆ ಉತ್ತರಿಸುವಂತೆ ಆದೇಶ ನೀಡಿದೆ.
ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುವುದೇ ಪಕ್ಷ ವಿರೋಧಿ ಧೋರಣೆಯಾಗಿದೆ. ಅದಲ್ಲದೇ ಟಿಪ್ಪು ಜಯಂತಿಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.
ಪಕ್ಷದ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ ಶಾಸಕ ಆನಂದ್ ಸಿಂಗ್, ಕ್ಷೇತ್ರದ ಜನತೆಯ ಪರವಾಗಿ ಜಯಂತಿಯಲ್ಲಿ ಪಾಲ್ಗೊಂಡಿದ್ದೇನೆ. ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಬಾರದು ಎಂದು ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿಲ್ಲ ಎಂದು ಬಿಜೆಪಿ ಶಾಸಕ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.