Select Your Language

Notifications

webdunia
webdunia
webdunia
webdunia

ಶಾಸಕ ಆನಂದ್ ಸಿಂಗ್ ಗೆ ಇನ್ನು ಮನೆಯಲ್ಲಿ ವಿಶ್ರಾಂತಿ!

ಶಾಸಕ
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕಳೆದ ರಾತ್ರಿ ಆಸ್ಪತ್ರೆಯಿಂದ ತರಾತುರಿಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆಂದು ಹೇಳಲಾಗುತ್ತಿದೆ.

ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದ ವೇಳೆ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಶಾಸಕ ಆನಂದ್ ಸಿಂಗ್  ಚಿಕಿತ್ಸೆಗೆ ದಾಖಲಾಗಿದ್ದರು.  ಆನಂದ್ ಸಿಂಗ್ ಅವರಿಗೆ ಇನ್ನೂ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು, ಹೀಗಾಗಿ ಮನೆಯಲ್ಲೇ ಆನಂದ್ ಸಿಂಗ್ ವಿಶ್ರಾಂತಿ ಪಡೆಯಲಿದ್ದಾರೆ. ಮಧ್ಯೆ ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ಜೆ.ಎನ್. ಗಣೇಶ್, ಆನಂದ್ ಸಿಂಗ್ ಅವರೊಂದಿಗೆ ಆಪ್ತರ ಮೂಲಕ ರಾಜಿ ಸಂಧಾನ ನಡೆಸಲು ಮುಂದಾಗಿದ್ದಾರೆಂದು ಹೇಳಲಾಗಿದೆ.

ಆದರೆ ಆನಂದ್ ಸಿಂಗ್ ಮತ್ತು ಅವರ ಕುಟುಂಬಸ್ಥರು ರಾಜಿ ಸಂಧಾನದ ಪ್ರಶ್ನೆಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿರುವ ಕಾರಣ ಗಣೇಶ್ ಅವರ ಅಜ್ಞಾತವಾಸ ಇನ್ನೂ ಕೆಲವು ಕಾಲ ಮುಂದುವರೆಯಲಿದೆ. ಫೆಬ್ರವರಿ 6 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೂ ಗಣೇಶ್ ಹಾಜರಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಹಿನ್ನೆಲೆಯಲ್ಲಿ ಶಾಸಕ ಆನಂದ್ ಸಿಂಗ್ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತ ಗಣೇಶ್ ಬಂಧನಕ್ಕೆ ಪೊಲೀಸರು ಯತ್ನ ಮುಂದುವರಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಶಾಸಕರು ಕೈಬಿಡಲ್ಲ ಎಂದ ಸಚಿವ