ಚನ್ನಪಟ್ಟಣ: ಬಹಿರಂಗ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎನ್ನುವ ಮೂಲಕ ಶಾಸಕ ಬಾಲಕೃಷ್ಣ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆಲುವಿಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೃತಜ್ಞತಾ ಸಮಾವೇಶ ನಡೆಸಲಾಗಿತ್ತು. ಈ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸುವ ಭರದಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಿದ್ಧರಾಗಿರುವ ಎಂದು ಬಾಲಕೃಷ್ಣ ಹೇಳಿದ್ದಾರೆ.
ಇದೀಗ ಮತ್ತೆ ಕಾಂಗ್ರೆಸ್ ನಲ್ಲಿ ಚರ್ಚೆಗೆ ನಾಂದಿ ಹಾಡಲಿದೆ. ಈಗಾಗಲೇ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ, ಡಿನ್ನರ್ ಮೀಟ್ ಮಾಡುವ ಮೂಲಕ ಪಕ್ಷದೊಳಗಿನ ಭಿನ್ನಮತ ಬಹಿರಂಗವಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿತ್ತು.
ಆದರೆ ಇದರ ನಡುವೆಯೂ ಬಾಲಕೃಷ್ಣ ಈ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಬಣದ ಕೆಂಗಣ್ಣಿಗೆ ಗುರಿಯಾಗಲಿದೆ. ಬಾಲಕೃಷ್ಣ ಹೇಳಿಕೆ ಬೆನ್ನಲ್ಲೇ ಮತ್ತೆ ಸಿದ್ದರಾಮಯ್ಯ, ಪರಮೇಶ್ವರ್ ಬೆಂಬಲಿಗರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡುವ ಸಾಧ್ಯತೆಯಿದೆ.