Select Your Language

Notifications

webdunia
webdunia
webdunia
webdunia

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sampriya

ವಿಜಯಪುರ , ಸೋಮವಾರ, 28 ಜುಲೈ 2025 (16:57 IST)
ವಿಜಯಪುರ: ವಿಜಯೇಂದ್ರ ಡಮ್ಮಿ ಅಂತ ಬಿಜೆಪಿ ಹೈಕಮಾಂಡ್‌ಗೆ ಮನವರಿಕೆಯಾಗಿದ್ದರಿಂದ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂಬವಾಗುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಡಮ್ಮಿ ಎಂದು ಹೈಕಮಾಂಡ್‌ಗೆ ಮನವರಿಕೆಯಾಗಿದೆ. ಅದಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೇಮಕಕ್ಕೆ ವಿಳಂಬ ಮಾಡುತ್ತಿದ್ದಾರೆ. ವಿಳಂಬದ ಅರ್ಥ ಏನೆಂದರೆ ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗೋದಿಲ್ಲ. 

ಸೋಮಣ್ಣ ಅವರು ಬೇರೆ ಬೇರೆ ಕೆಲಸದ ನಿಮಿತ್ತ ಅಮಿತ್ ಶಾ ಅವರನ್ನು ಭೇಟಿಯಾಗಿರಬಹುದು. ಆದರೆ ಸೋಮಣ್ಣ ಕೂಡಾ ಬಿಜೆಪಿ ರಾಜಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದರು.

ಆ.2ರಂದು ವಿಜಯಪುರಕ್ಕೆ ಬಿಜೆಪಿ ವಿಭಾಗ ಮಟ್ಟದ ಕಾರ್ಯಕ್ರಮಕ್ಕೆ ವಿಜಯೇಂದ್ರ ಅವರು ಭೇಟಿ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷ ಬಿಟ್ಟ ಮೇಲೆ ವಿಜಯೆಂದ್ರ ವಿಜಯಪುರಕ್ಕೆ ಬರುತ್ತಿದ್ದಾನೆ. ನಾನು ಬಿಜೆಪಿಯಲ್ಲಿದ್ದಾಗ ವಿಜಯೇಂದ್ರನಿಗೆ ಇಲ್ಲಿ ಬರೋಕೆ ಧೈರ್ಯ ಇರಲಿಲ್ಲ ಎಂದು ಟಾಂಗ್ ಕೊಟ್ಟರು.


Share this Story:

Follow Webdunia kannada

ಮುಂದಿನ ಸುದ್ದಿ

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ