Publish Date: Fri, 04 May 2018 (10:19 IST)
Updated Date: Fri, 04 May 2018 (10:23 IST)
ಬೆಂಗಳೂರು: ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ಕುಮಾರ್ ವಿಧಿವಶರಾಗಿದ್ದಾರೆ. ಹೃದಯ ಖಾಯಿಲೆಯಿಂದ ಅವರು ಬಳಲುತ್ತಿದ್ದರು.
ಎರಡು ತಿಂಗಳಿನಿಂದ ಹೃದಯ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಬಿಜೆಪಿ ನಾಯಕರು, ಬೆಂಬಲಿಗರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರಾದ ಅನಂತ ಕುಮಾರ್, ಸದಾನಂದ ಗೌಡ ವಿಜಯ್ ಕುಮಾರ್ ಅಂತಿಮ ದರ್ಶನದ ವೇಳೆ ಪರಸ್ಪರ ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತರು. ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯ ಕ್ರಿಯೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.