Publish Date: Wed, 09 Jan 2019 (12:10 IST)
Updated Date: Wed, 09 Jan 2019 (12:12 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರನ್ನು ಅಮಾನತು ಮಾಡಿ ಎಂದು ಕೆಪಿಸಿಸಿ ಆದೇಶಿಸಿದೆ.
ಇಂದು ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸೇರಿದಂತೆ ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಡಾ.ಕೆ.ಸುಧಾಕರ್ ಅವರ 200 ಕ್ಕೂ ಹೆಚ್ಚು ಬೆಂಬಲಿಗರು ಸಭೆಗೆ ಆಗಮಿಸಿ ಗಲಾಟೆ ಮಾಡಿ ಸಭೆಗೆ ತೊಂದರೆಯನ್ನುಂಟುಮಾಡಿದ್ದಾರೆ. ಇದರಿಂದ ಕೋಪಗೊಂಡ ಕೆಪಿಸಿಸಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯದರ್ಶಿ ಎಂ.ಕೆ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್, ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಅಮಾನತು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ