ಶಾಸಕರ ವಿರುದ್ಧ ಮಾತನಾಡಿದ ವ್ಯಕ್ತಿಗೆ ಬೆದರಿಕೆ: ಆತ್ಮಹತ್ಯೆಗೆ ಶರಣು

Webdunia
ಸೋಮವಾರ, 6 ಆಗಸ್ಟ್ 2018 (15:16 IST)
ಶಾಸಕರೊಬ್ಬರ ವಿರುದ್ಧ ಮಾತನಾಡಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಮಾತನಾಡಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ  ತಾಲೂಕಿನ ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ.

ಗೊಬ್ಬರಗಾಲ ಗ್ರಾಮದ ನಾಗೇಂದ್ರ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ರಾತ್ರಿ ಬಾರ್ ವೊಂದರಲ್ಲಿ ಮದ್ಯಪಾನ ಮಾಡುವ ವೇಳೆ ನಾಗೇಂದ್ರ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಮಾತನಾಡಿದ್ದಾರೆ. ಈ ವೇಳೆ ಅಲ್ಲೇ ಇದ್ದ ಶಾಸಕರ ಬೆಂಬಲಿಗರು ಕೋಪಗೊಂಡು ನಾಗೇಂದ್ರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರು ಶಾಸಕರ ಬೆಂಬಲಿಗರನ್ನ ಸಾಮಾಧಾನ ಪಡಿಸಿ ನಾಗೇಂದ್ರನನ್ನ ಊರಿಗೋಗುವಂತೆ ಕಳುಹಿಸಿದ್ದಾರೆ. ಆದ್ರೆ, ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಗೊಬ್ಬರಗಾಲಕ್ಕೆ ಹೋಗಿ ಅಲ್ಲೂ ಕೂಡ ಹಲ್ಲೆ ಮಾಡಿದ್ದಾರೆ. ಗ್ರಾಮಸ್ಥರು ಮಧ್ಯ ಪ್ರವೇಶಿಸಿ ಅಲ್ಲೂ ಕೂಡ ಶಾಸಕರ ಬೆಂಬಲಿಗರನ್ನ ಸಮಾಧಾನಿಸಿ ವಾಪಸ್ ಕಳುಹಿಸಿದ್ದಾರೆ. ಗ್ರಾಮದಿಂದ ತೆರಳಿದ ಶಾಸಕರ ಬೆಂಬಲಿಗರ ಮತ್ತೆ ನಾಗೇಂದ್ರನಿಗೆ ಕರೆ ಮಾಡಿ ತಮ್ಮಲ್ಲಿಗೆ ಕರೆಸಿಕೊಂಡು, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಇದ್ರಿಂದ ಭಯಗೊಂಡ ನಾಗೇಂದ್ರ ಗ್ರಾಮದ ಹೊರವಲಯದ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬೆಂಬಲಿಗರಾದ ಮಧು, ದಿಲೀಪ, ರವಿ ಸೇರಿದಂತೆ ಏಳು ಮಂದಿ ವಿರುದ್ಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತ ಕ್ರಮವಾಗಿ ಗ್ರಾಮಕ್ಕೆ ಡಿ.ಆರ್. ತುಕುಡಿ ನಿಯೋಜಿಸಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments