Publish Date: Sun, 02 Jun 2024 (17:16 IST)
Updated Date: Sun, 02 Jun 2024 (17:26 IST)
ಹೊಳೇನರಸೀಪುರ: ಕುಟುಂಬಕ್ಕೆ ಎದುರಾಗಿರುವ ಸಂಕಷ್ಟ ದೂರವಾಗಲೆಂದು ಶಾಸಕ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬೆಳಿಗ್ಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಅವರು, ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.
ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಲೋಕಸಭೆಯ ಚುನಾವಣೋತ್ತರ ಸಮೀಕ್ಷಗಳ ಕುರಿತು ಪ್ರತಿಕ್ರಿಯಿಸಿದ ಅವರು, ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇ ಬೇಕು. ಲಕ್ಷ್ಮೀನರಸಿಂಹ ಸ್ವಾಮಿ ಇರುವವರೆಗೂ ನಮಗೇನು ತೊಂದರೆಯಿಲ್ಲ. ಲೋಕಸಭೆ ಚುನಾವಣೆಯ ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳಿದರು.
ಭವಾನಿ ರೇವಣ್ಣ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ಅದೇನೂ ನನಗೆ ಗೊತ್ತಿಲ್ಲ ಎಂದಷ್ಟೇ ಹೇಳಿದರು.