Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

DK Shivakumar

Krishnaveni K

ಬೆಂಗಳೂರು , ಶನಿವಾರ, 13 ಡಿಸೆಂಬರ್ 2025 (14:06 IST)
ಬೆಂಗಳೂರು: ರಾಜ್ಯ ಕುಸ್ತಿ ಕಿತ್ತಾಟದಲ್ಲಿ ಈಗ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿರುವ ಅವರ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಸಿಎಂ ಆಗುವ ದಿನಾಂಕವನ್ನೂ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಇನ್ನೂ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಡಿಕೆಶಿ ಮತ್ತು ಸಿದ್ದು ಬಣ ತಮ್ಮ ನಾಯಕನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಇದರ ನಡುವೆ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್ ಡಿಕೆಶಿ ಯಾವಾಗ ಸಿಎಂ ಆಗಲಿದ್ದಾರೆ ಎಂದು ದಿನಾಂಕವನ್ನೂ ಘೋಷಿಸಿದ್ದಾರೆ.

‘ಡಿಕೆಶಿಯವರಿಗೆ ಒಂದು ಅವಕಾಶ ಇದ್ದೇ ಇದೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ. ಜನವರಿ 6 ರಂದು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ’ ಎಂದಿದ್ದಾರೆ. ಅವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇನ್ನು, ನಾಳೆ ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಇದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿರುವುದಾಗಿ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಆದರೆ ಈ ವೇಳೆ ವರಿಷ್ಠರನ್ನು ಭೇಟಿಯಾಗಲ್ಲ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ