Publish Date: Mon, 26 Feb 2024 (15:00 IST)
Updated Date: Mon, 26 Feb 2024 (15:10 IST)
ಬೆಂಗಳೂರು-ರಾಜ್ಯಸಭಾ ಚುನಾವಣೆ ಹಿನ್ನಲೆ ಪಕ್ಷೇತರ ಶಾಸಕ ಜರ್ನಾದನ್ ರೆಡ್ಡಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದಾರೆ.ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಶಿವರಾಜ್ ತಗಂಡಗಿ, ಸಿಎಂ ಸಿದ್ದರಾಮಯ್ಯರನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಜನಾರ್ಧನ ರೆಡ್ಡಿ ಚರ್ಚೆ ನಡೆಸಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್ ಮನವಿ ಮಾಡಿದ್ದಾರೆಂದು ವಿಧಾನಸೌಧದಲ್ಲಿ ಪಕ್ಷೇತರ ಶಾಸಕ ಜರ್ನಾದನ ರೆಡ್ಡಿ ಹೇಳಿದ್ದಾರೆ.
ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ.ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಎಲ್ಲರೂ ಮನವಿ ಮಾಡಿದ್ದಾರೆ.ನಾನು ಇನ್ನು ಏನು ತೀರ್ಮಾನ ಮಾಡಿಲ್ಲ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.