ಸಂತ್ರಸ್ತರ ಮನವಿ ಪತ್ರ ಓದಿದ ಶಾಸಕ ಜಾರಕಿಹೊಳಿ

Webdunia
ಮಂಗಳವಾರ, 5 ನವೆಂಬರ್ 2019 (18:18 IST)
ಸಂತ್ರಸ್ತರ ಮನವಿ ಪತ್ರವನ್ನು ಓದಿದ್ದಾರೆ ಶಾಸಕ ಜಾರಕಿಹೊಳಿ.

ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಎ ಮತ್ತು ಬಿ ಕೆಟಗರಿ ಮನೆಗಳ ನಿರ್ಮಾಣಕ್ಕೆ ಪರಿಹಾರ ನೀಡುವುದರ ಜತೆಗೆ ಸಿ ಕೆಟಗರಿಯ ಎಷ್ಟೇ ಮನೆಗಳಿದ್ದರೂ ಇತರೆ ವಸತಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದರು.

ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಲೋಳಸೂರ ಗ್ರಾಮ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಎ, ಬಿ ಮತ್ತು ಸಿ‌ ಕೆಟಗರಿ ವಿಂಗಡಣೆ ಸಮರ್ಪಕವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಆದ್ದರಿಂದ ಇಂತಹ ಆರೋಪ ಇರುವ ಕಡೆಗಳಲ್ಲಿ ಮರು ಪರಿಶೀಲನೆ ನಡೆಸಬೇಕು ಎಂದರು.

ಈ ಕುರಿತು ಗ್ರಾಮಸ್ಥರು ಸಿದ್ಧಪಡಿಸಿದ್ದ ಮನವಿಪತ್ರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸ್ವತಃ ಓದಿ ಸಚಿವ ಸೋಮಣ್ಣ ಅವರಿಗೆ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments