Publish Date: Thu, 29 Mar 2018 (13:55 IST)
Updated Date: Thu, 29 Mar 2018 (13:56 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಾಳಯ ಸೇರಿಕೊಳ್ಳಲು ಬಯಸಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸ್ಪೀಕರ್ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಬೇಕಿದ್ದ ಶಾಸಕ ಗುತ್ತೇದಾರ್ ಗೆ ಸ್ಪೀಕರ್ ಊರಲ್ಲಿಲ್ಲದ ಕಾರಣ ರಾಜೀನಾಮೆ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದಾಗಿ ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ನಡುವೆ ಜೆಡಿಎಸ್ ಅಥವಾ ಬಿಜೆಪಿ ಸೇರುತ್ತಾರೆ ಎಂಬ ಗೊಂದಲಗಳಿಗೆ ತೆರೆ ಎಳೆದ ಅವರು ಮುಂದೆ ತಾನು ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾದ ಗುತ್ತೇದಾರ್ ಯಾವುದೇ ಷರತ್ತುಗಳಿಲ್ಲದೇ ಬಿಜೆಪಿ ಸೇರುತ್ತಿರುವುದಾಗಿ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ