Webdunia - Bharat's app for daily news and videos

Install App

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

Sampriya
ಭಾನುವಾರ, 20 ಜುಲೈ 2025 (16:53 IST)
Photo Credit X
ಬೀದರ್: ವಿರೋಧಿಗಳಿಗೆ ನನ್ನ ಮಗ ಪ್ರತೀಕ್ ಮುಖ್ಯ ಅಲ್ಲ, ಆತನ ಹೆಸರಿನ ಮೂಲಕ ನನ್ನ ಹಣಿಯುವ ಕುತಂತ್ರ ಮಾಡುತ್ತಿದ್ದಾರೆ. ನಾನೇ ಅವರ ಮುಖ್ಯ ಟಾರ್ಗೆಟ್. ನನ್ನ ಮಗನಾಗಲಿ, ನಾನಾಗಲಿ ಏನೂ ತಪ್ಪು ಮಾಡಿಲ್ಲ ಎಂದು ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಹೇಳಿದರು. 

ಮಹಾರಾಷ್ಟ್ರ ಉದಗೀರನ ನಾಮದೇವ್ ರಾಠೋಡ್ ಅವರ ಮಗಳೊಂದಿಗೆ ನನ್ನ ಮಗ ಪ್ರತೀಕ್ ಜೊತೆ 2023ರಲ್ಲಿ ನಿಶ್ಚಿತಾರ್ಥವಾಯಿತು. ಹುಡುಗ–ಹುಡುಗಿ ಪರಸ್ಪರ ಒಪ್ಪಿದ್ದರಿಂದ ಹಿರಿಯರ ಸಮ್ಮುಖದಲ್ಲಿ ಮುದುವೆಗೆ ನಿಶ್ಚಯಿಸಲಾಗಿತ್ತು. ಆದರೆ, ಯುವತಿ ಬೇರೊಬ್ಬ ಯುವಕನೊಂದಿಗೆ ನಿರಂತರವಾಗಿ ಚಾಟ್ ಮಾಡುತ್ತಿರುವುದು ತಿಳಿಯಿತು. ಈ ವಿಚಾರವಾಗಿ ಅವರ ಮನೆಯವರನ್ನು ಕರೆಸಿ ಚರ್ಚಿಸಿ ಸಮಾಜದ ಹಿರಿಯರ ಸಮ್ಮುಖದಲ್ಲಿ ಮದುವೆ ಮಾಡದಿರಲು 2024ರ ನವೆಂಬರ್‌ನಲ್ಲಿ ನಿರ್ಧರಿಸಲಾಯಿತು.

ಮದುವೆಯಾದ ನಂತರ ಕೊನೆ ತನಕ ಬದುಕಬೇಕಾಗುತ್ತದೆ. ಸಂಶಯದಿಂದ ಜೀವನ ಸಾಗಿಸಲು ಆಗುವುದಿಲ್ಲ. ಹೀಗಾಗಿ ಈ ತೀರ್ಮಾನಕ್ಕೆ ಬರಲಾಯಿತು ಎಂದು ವಿವರಿಸಿದರು. ಯುವತಿಯ ಚಾಟ್ ಸಂಭಾಷಣೆಯ ವಿವರ ತೋರಿಸಿದರು.

ಎರಡೂ ಕುಟುಂಬದವರ ಒಪ್ಪಿಗೆಯಿಂದ ಮದುವೆ ಕೈಬಿಡಲು ನಿರ್ಧರಿಸಲಾಗಿದೆ. ಆದರೆ, ಆ ಯುವತಿಗೆ ಏನು ಆಮಿಷವೊಡ್ಡಿದ್ದಾರೆ ಗೊತ್ತಿಲ್ಲ. ಅವರು ನನ್ನ ಮಗ, ನನ್ನ ಹಾಗೂ ಕುಟುಂಬದವರ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ

 'ನನ್ನನ್ನು ಮುಗಿಸಬೇಕೆಂಬ ಒಂದೇ ಉದ್ದೇಶದಿಂದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಭಗವಂತ ಖೂಬಾ‌ ಅವರು ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ಅವರ ಕುತಂತ್ರದಿಂದಲೇ ನನ್ನ ಹಾಗೂ ನಮ್ಮ ಕುಟುಂಬ ಸದಸ್ಯರ ವಿರುದ್ಧ ಮಹಿಳಾ‌ ಆಯೋಗಕ್ಕೆ ದೂರು ಕೊಡಲಾಗಿದೆ' ಎಂದು ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಗಂಭೀರ ಆರೋಪ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments